ಡೀಪ್ ಫೇಕ್ ಕಾಟ ಮತ್ತೆ ಶುರುವಾಗಿದ್ದು, ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟಾರ್ಗೆಟ್ ಆಗಿದ್ದಾರೆ. ಹಣಕಾಸು ಹೂಡಿಕೆ ಯೋಜನೆ ಉದ್ದೇಶಿಸಿ ಮಾತನಾಡಿರುವ ವೀಡಿಯೋವನ್ನು ಎಡಿಟ್ ಮಾಡಿರುವ ದುಷ್ಕರ್ಮಿಗಳು, SMನಲ್ಲಿ ಹಂಚಿಕೊಂಡಿದ್ದಾರೆ.

ಈ ಸುಳ್ಳು ಡೀಪ್ ಫೇಕ್ ವೀಡಿಯೋ ಮಾಡಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ್ದಾರೆ ಎಂದು ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ FIR ದಾಖಲಾಗಿದೆ. ಇದೀಗ ಈ ಬಗ್ಗೆ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.




