ಹಳಿ ತಪ್ಪಿದ ದೆಹಲಿ-ಕಾಮಾಖ್ಯ ಈಶಾನ್ಯ ಎಕ್ಸ್‌ಪ್ರೆಸ್ ರೈಲು: ನಾಲ್ಕು ಸಾವು

Share with

ಪಾಟ್ನಾ: ರೈಲು ಹಳಿತಪ್ಪಿದ ಪರಿಣಾಮ ನಾಲ್ವರು ಮೃತಪಟ್ಟು 70 ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಬಕ್ಸರ್ ಎಂಬಲ್ಲಿ ಅ.11 ರಂದು ರಾತ್ರಿ ನಡೆದಿದೆ ಎಂದು ವರದಿಯಾಗಿದೆ.

ದೆಹಲಿ-ಕಾಮಾಖ್ಯ ಈಶಾನ್ಯ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಈ ಘಟನೆ ಸಂಭವಿಸಿದ್ದು, ರೈಲು ದೆಹಲಿಯ ಆನಂದ್ ವಿಹಾರ್ ಟರ್ಮಿನಲ್ ನತ್ತ ತಲುಪುವ ವೇಳೆ ರಘುನಾಥಪುರ ನಿಲ್ದಾಣದ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು ಈ ಕಾರಣದಿಂದ ರೈಲು ಉರುಳಿ ಬಿದ್ದಿದೆ. ಈ ಘಟನೆಯಲ್ಲಿ 4 ಮಂದಿ ಪ್ರಯಾಣಿಕರು ಮೃತಪಟ್ಟು ಸುಮಾರು 70 ಮಂದಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತ ಸಂಭವಿಸುತ್ತಿದ್ದಂತೆ, ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಲು ಮತ್ತು ಹಳಿತಪ್ಪಿದ ಬೋಗಿಗಳಿಂದ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ಇನ್ನು ಅಪಘಾತದ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳು ರೈಲಿನಿಂದ ಪ್ರಯಾಣಿಕರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಘಟನೆಗೆ ಸಂತಾಪ ಸೂಚಿಸಿದ್ದು, ಹಳಿತಪ್ಪಿದಕ್ಕೆ ಮೂಲ ಕಾರಣವನ್ನು ತನಿಖೆ ಮಾಡಲಾಗುವುದೆಂದು ಟ್ವಿಟರ್‌ ನಲ್ಲಿ(ಎಕ್ಸ್)‌ ನಲ್ಲಿ ಟ್ವೀಟ್‌ ಮಾಡಿದ್ದಾರೆ.

ಘಟನೆಯಲ್ಲಿ ಮೃತಪಟ್ಟ ಸಂಬಂಧಿಕರಿಗೆ ರೈಲ್ವೇಸ್‌ 10 ಲಕ್ಷ ರೂ. ಪರಿಹಾರವನ್ನು ನೀಡುವುದಾಗಿ ಹೇಳಿದೆ.


Share with

Leave a Reply

Your email address will not be published. Required fields are marked *