ವಿಐಪಿ ಪಾಸ್‌ಗಳ ದುರ್ಬಳಕೆಗೆ ಕಡಿವಾಣ ಹಾಕಲು ಆಗ್ರಹ ಪಾಸ್‌ ರದ್ದತಿಗೆ ರೈತ ಸಂಘ ಒತ್ತಾಯ

Share with

ಚನ್ನರಾಯಪಟ್ಟಣ: ಹಾಸನಾಂಬೆ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಗಣ್ಯರು ಹಾಗೂ ಪ್ರಮುಖರಿಗೆ ವಿತರಿಸಲಾಗಿರುವ ವಿಐಪಿ ಪಾಸ್‌ಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿಐಪಿ ಪಾಸ್‌ಗಳನ್ನು ತಕ್ಷಣವೇ ರದ್ದುಗೊಳಿಸುವಂತೆ ಆಗ್ರಹಿಸಿರುವ ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ವಿಐಪಿ ಪಾಸ್‌ಗಳ ಬಳಕೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಅನಗತ್ಯವಾಗಿ ಪಾಸ್‌ಗಳನ್ನು ವಿತರಿಸುವುದನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನೂ ಎರಡು ದಿನಗಳೊಳಗಾಗಿ ವಿಐಪಿ ಪಾಸ್‌ಗಳನ್ನು ರದ್ದುಗೊಳಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.


Share with

Leave a Reply

Your email address will not be published. Required fields are marked *