ಸಕಲೇಶಪುರವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲು ಒತ್ತಾಯ.

Share with



ಸಕಲೇಶಪುರ : ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಕಾಫಿ, ಕಾಳುಮೆಣಸು, ಏಲಕ್ಕಿ ಹಾಗೂ ಭತ್ತದ ಬೆಳೆಗಾರರು ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸುವಂತೆ ಶಾಸಕ ಸಿಮೆಂಟ್ ಮಂಜು ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ವಿಧಾನಸಭೆಯಲ್ಲಿಯೂ ರೈತರ ಸಮಸ್ಯೆಗಳ ಕುರಿತು ಧ್ವನಿ ಎತ್ತಿರುವ ಅವರು, ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಅಲ್ಲದೆ, ಸಂಬಂಧಪಟ್ಟ ಸಚಿವರು ಹಾಗೂ ಕೇಂದ್ರದ ಬರ ಅಧ್ಯಯನ ತಂಡಕ್ಕೆ ಮನವಿ ಸಲ್ಲಿಸಿ, ಬೆಳೆ ನಷ್ಟದಿಂದ ತೊಂದರೆಗೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿದ್ದಾರೆ. ಬರಪರಿಹಾರ ಕ್ರಮಗಳನ್ನು ಶೀಘ್ರವಾಗಿ ಜಾರಿಗೊಳಿಸಿ, ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡಬೇಕೆಂಬುದು ಬೆಳೆಗಾರರ ಪ್ರಮುಖ ಬೇಡಿಕೆಯಾಗಿದೆ.


Share with

Tags:

Leave a Reply

Your email address will not be published. Required fields are marked *