ಉಡುಪಿ: ಎಸ್ ಡಿಪಿಐ ವತಿಯಿಂದ ಮಾರ್ಚ್ 8ರಂದು ಮಧ್ಯಾಹ್ನ 2.30ಕ್ಕೆ ಅಮ್ಮಣಿರಾಮಣ್ಣ ಶೆಟ್ಟಿ ಸಭಾಭವನದಲ್ಲಿ ‘ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್ ಡಿಪಿಐ ಪಕ್ಷದ ರಾಜ್ಯ ಮಾಧ್ಯಮ ಉಸ್ತುವಾರಿ ರಿಯಾಝ್ ಕಡಂಬು ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾ.6ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಪ್ರಜಾಪಭುತ್ವದ ಮೇಲೆ ಫ್ಯಾಸಿಸ್ಟ್ ಶಕ್ತಿಗಳು ನಡೆಸುತ್ತಿರುವ ಪ್ರಹಾರದ ವಿರುದ್ಧ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.
ಸುಪ್ರೀಂಕೋರ್ಟ್ ತನ್ನ ಕೆಲಸ ಪಕ್ಕಕ್ಕಿಟ್ಟು ಮತ ಎಣಿಕೆ ಕಾರ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಚಂಢೀಗಡ ಮೇಯರ್ ಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಲು ಚುನಾವಣಾ ಅಧಿಕಾರಿಯನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ನಮ್ಮ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳಲು ಇದೊಂದೇ ಪ್ರಕರಣವಲ್ಲ, ನೂರಾರು ಉದಾಹರಣೆಗಳಿವೆ ಎಂದು ವಾಗ್ದಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಶಾಹಿದ್ ಆಲಿ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವಾ, ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಹನೀಫ್ ಮೂಲೂರು ಮತ್ತು ಉಡುಪಿ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ಅಝೀಝ್ ಉಪಸ್ಥಿತರಿದ್ದರು.