ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Share with

ವಿದ್ಯಾರ್ಥಿಗಳಿಂದ 2023-24ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯದ ಅರ್ಹ ಅಲ್ಪ ಸಂಖ್ಯಾತರಾದ ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2023-24ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ 1ರಿಂದ 8ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP) https://ssp.karnataka.gov.inನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಅರ್ಹ ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿದ್ದು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50 ಶೇಕಡ ಅಂಕಗಳನ್ನು ಗಳಿಸಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷ ರೂಪಾಯಿ ಒಳಗಿರಬೇಕು.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ https://dom.karnataka.gov.in/dakshina_kannada/public ಅಥವಾ SSP ಪೋರ್ಟಲ್ https://ssp.karnataka.gov.inಗೆ ಭೇಟಿ ನೀಡಿ. ಅಥವಾ ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸುವಂತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ದ.ಕ. ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *