ಇಸ್ರೇಲ್ ದೇಶದಲ್ಲಿ ದ.ಕ. ಜಿಲ್ಲೆಯ ನಾಗರಿಕರಿದ್ದಲ್ಲಿ ಅವರ ಬಗ್ಗೆ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ

Share with

ಇಸ್ರೇಲ್ ದೇಶದಲ್ಲಿ ದ.ಕ. ಜಿಲ್ಲೆಯ ನಾಗರಿಕರಿದ್ದಲ್ಲಿ ಅವರ ಬಗ್ಗೆ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ ಕೋರಲಾಗಿದೆ.

ಮಂಗಳೂರು: ಉದ್ಯೋಗ ನಿಮಿತ್ತ ಇಸ್ರೇಲ್ ನಲ್ಲಿ ಕರಾವಳಿಯ ಸಾವಿರಾರು ಜನರು ಸಿಲುಕಿದ್ದಾರೆ. ಹಾಗಾಗಿ ಇಸ್ರೇಲ್ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಪ್ರಕಟನೆಯೊಂದನ್ನು ಹೊರಡಿಸಿದ್ದಾರೆ.

ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ: 1077/ 0824-2442590 ಗೆ ಕರೆ ಮಾಡಿ ಕೂಡಲೇ ನೀಡುವಂತೆ ಕೋರಲಾಗಿದೆ. ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ 080-22340676, 080-22253707 ಮಾಹಿತಿ ನೀಡುವಂತೆ ತಿಳಿಸಿದೆ.


Share with

Leave a Reply

Your email address will not be published. Required fields are marked *