ಧರ್ಮಸ್ಥಳ: ಧರ್ಮ ಸಂರಕ್ಷಣೆಗಾಗಿ ಧರ್ಮ ಸಂರಕ್ಷಣಾ ಯಾತ್ರೆಯನ್ನು ಅಭಿಯಾನದ ರೀತಿಯಲ್ಲಿ ವಿಶೇಷವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ರಕ್ಷಣೆಗಾಗಿ, ಸಾವಿರಾರು ವರ್ಷಗಳ ಇತಿಹಾಸವಿರುವ ಧರ್ಮಸ್ಥಳ ವಿರುದ್ಧ ಅಪಪ್ರಚಾರವನ್ನು ನಡೆಸುತ್ತಿರುವವರ ದುಷ್ಟಶಕ್ತಿಗಳ ದಮನಕ್ಕಾಗಿ ಅಕ್ಟೋಬರ್ ತಿಂಗಳಿನಲ್ಲಿ ಧರ್ಮ ಸಂರಕ್ಷಣ ರಥಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಕೊಲ್ಲೂರು ಮೂಕಾಂಬಿಕ ಕ್ಷೇತ್ರದಿಂದ ಆರಂಭವಾಗಿ, ಉಡುಪಿ, ಕಾರ್ಕಳ, ಮೂಡಬಿದ್ರೆ, ವೇಣೂರು ಮೂಲಕ ನೇತ್ರಾವತಿಗೆ ಬಂದು ಅಲ್ಲಿಂದ ಧರ್ಮಸ್ಥಳಕ್ಕೆ ಒಂದು ರಥಯಾತ್ರೆ ಹಾಗೂ ಇನ್ನೊಂದು ಕದ್ರಿಯಿಂದ ಹೊರಟು ಕಲ್ಲಡ್ಕ, ವಿಟ್ಲ, ಉಪ್ಪಿನಂಗಡಿ, ಪುತ್ತೂರು, ಸುಬ್ರಹ್ಮಣ್ಯ ಮೂಲಕ ನೇತ್ರಾವತಿಗೆ ಬಂದು ಎರಡು ರಥಯಾತ್ರೆ ಧರ್ಮಸ್ಥಳ ಕ್ಷೇತ್ರಕ್ಕೆ ತೆರಳಿ ಶ್ರೀ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲಕ್ಷಾಂತರ ಮಂದಿ ಭಾಗವಹಿಸುವ ಈ ಕಾರ್ಯಕ್ರಮದ ಯಶಸ್ವಿಗಾಗಿ ಧರ್ಮಸ್ಥಳದ ಶ್ರಿ ಅಣ್ಣಪ್ಪ ಸ್ವಾಮಿ ಸನ್ನಿಧಿ, ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನಾ ಸಂಕಲ್ಪ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ, ಡಾ.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರುಶೆಟ್ಟಿ, ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್, ಪಾರ್ಶ್ವನಾಥ ಜೈನ್, ಧನಕೀರ್ತಿ ಆರಿಗ, ಬಾಲಕೃಷ್ಣ ಪೂಜಾರಿ ಪೇಟೆಯ ಅಂಗಡಿಯ ಮಾಲಕರು, ನೌಕರರು, ಕ್ಷೇತ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.