ಪುತ್ತೂರು: ಇತ್ತೀಚೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಇಲ್ಲಿನ ಪ್ರಾಥಮಿಕ ವಿಭಾಗದ ಮುಖ್ಯಗುರು ಬಾಬು ಎಂ.ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಕ್ಟೋಬರ್ 27ರಿಂದ 29ರ ವರೆಗೆ ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾಟಲ್ಲಿ ಬಾಬು ಎಂ.ರವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಇವರು ಈಶ್ವರಮಂಗಲದ ಸಜಂಕಾಡಿ ನಿವಾಸಿಯಾಗಿದ್ದು ಪ್ರಸ್ತುತ ಸಂಟ್ಯಾರ್ ಎಂಬಲ್ಲಿ ವಾಸ್ತವ್ಯ ಹೊಂದಿದ್ದಾರೆ.