ʼಸ್ಪಾʼ ಮಾಲೀಕನಿಂದ ಸುಲಿಗೆ ಪ್ರಕರಣ: ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಅರೆಸ್ಟ್

Share with

ಬೆಂಗಳೂರು: ಸ್ಪಾ ಮಾಲೀಕನೊಬ್ಬನಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನಿರೂಪಕಿ ದಿವ್ಯ ವಸಂತರನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನೊಬ್ಬನಿಗೆ ಬೆದರಿಕೆ ಹಾಗೂ ಬ್ಲ್ಯಾಕ್‌ ಮೇಲ್‌ ಮಾಡಿ ಅವರಿಂದ 15 ಲಕ್ಷ ರೂ. ಸುಲಿಗೆಗೆ ಯತ್ನಿಸಿದ ಪ್ರಕರಣದಲ್ಲಿ ದಿವ್ಯ ವಸಂತ್‌ ರನ್ನು ಜೀವನ್ ಭೀಮಾನಗರ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಈಗಾಗಲೇ ಖಾಸಗಿ ಸುದ್ದಿ ವಾಹಿನಿಯ ಕಾರ್ಯನಿರ್ವಾಹಕರಾಗಿದ್ದ ರಾಜಾನುಕುಂಟೆ ವೆಂಕಟೇಶ್, ದಿವ್ಯ ತಮ್ಮ ಸಂದೇಶ್ ರನ್ನು ಬಂಧಿಸಲಾಗಿದೆ.
ಪ್ರಕರಣದ ಹಿನ್ನೆಲೆ:  ದಿವ್ಯ ವಸಂತ್‌ ಹಾಗೂ ತಂಡ ಸೇರಿಕೊಂಡು ವ್ಯಾಟ್ಸಾಪ್‌ ನಲ್ಲಿ ʼಸ್ಪೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್ ನ್ನು ಮಾಡಿಕೊಂಡಿದ್ದರು. ಇದರಲ್ಲಿ ಹಣವುಳ್ಳ ಸಿರಿವಂತರನ್ನು ಗುರಿಯಾಗಿಸಿಕೊಂಡು ಅವರನ್ನು ಬ್ಲ್ಯಾಕ್‌ ಮೇಲ್(Black mail) ಅವರಿಂದ ಸುಲಿಗೆ ಮಾಡುವುದು ಹೇಗೆನ್ನುವ ಯೋಜನೆಯ ಬಗ್ಗೆ ಚರ್ಚೆ ನಡೆಯುತ್ತಿತ್ತು.

ಇವರ ಸುಲಿಗೆಯ ಬಲೆಗೆ ಇಂದಿರಾ ನಗರದಲ್ಲಿರುವ ʼಸ್ಪಾʼ ವೊಂದರ ಮಾಲೀಕನಿಗೆ ಬೆದರಿಕೆ ಹಾಕಿ ಅವರಿಂದ 1 ಲಕ್ಷ ರೂ. ಸುಲಿಗೆ ಮಾಡಿದ್ದು, ಈ ಸಂಬಂಧ ಸ್ಪಾ ಮಾಲೀಕ ದೂರಿನ ಮೇರೆಗೆ ಪೊಲೀಸರು ಎಫ್‌ ಐಆರ್‌ ದಾಖಲಿಸಿಕೊಂಡು ವೆಂಕಟೇಶ್‌ ಹಾಗೂ ಸಂದೇಶ್‌ ಅವರನ್ನು ಬಂಧಿಸಿದ್ದರು.

ಇದಾದ ಬಳಿಕ ಪ್ರಕರಣದ ಮತ್ತೊಂದು ಆರೋಪಿ ದಿವ್ಯ ವಸಂತ್‌ ಅವರನ್ನು ಪೊಲೀಸರು ಹುಡುಕಲು ಶುರು ಮಾಡಿದ್ದರು. ಆದರೆ ದಿವ್ಯ ಪರಾರಿ ಆಗಿದ್ದರು. ತಮಿಳುನಾಡಿನಿಂದ, ಕೇರಳಕ್ಕೆ ಹೋಗಿರುವ ಮಾಹಿತಿ ಪಡೆದ ಪೊಲೀಸರು ಕೇರಳದಲ್ಲಿ ದಿವ್ಯರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.


Share with

Leave a Reply

Your email address will not be published. Required fields are marked *