ನವದೆಹಲಿ: ಬೆಳಕಿನ ಹಬ್ಬ ದೀಪಾವಳಿಯನ್ನು ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರ್ಪಡೆಗೊಳಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಭಾರತ ಮತ್ತು ವಿಶ್ವದ ಜನರು ರೋಮಾಂಚನಗೊಂಡಿದ್ದಾರೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿಯವರು, ದೀಪಾವಳಿಯು ನಮ್ಮ ಸಂಸ್ಕೃತಿ ಮತ್ತು ನೀತಿಯೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಇದು ನಾಗರಿಕತೆಯ ಆತ್ಮವಾಗಿದೆ. ಜ್ಞಾನೋದಯ ಮತ್ತು ಸದಾಚಾರವನ್ನು ಪ್ರತಿನಿಧಿಸುತ್ತದೆ ಎಂದು ಬಣ್ಣಿಸಿದರು.
ಯುನೆಸ್ಕೋ ಸೇರ್ಪಡೆಯು ಹಬ್ಬದ ಜಾಗತಿಕ ಜನಪ್ರಿಯತೆ ಹೆಚ್ಚಲು ಮತ್ತಷ್ಟು ಕೊಡುಗೆ ನೀಡಲಿದೆ ಎಂದು ತಿಳಿಸಿದ್ದಾರೆ.”ಪ್ರಭು ಶ್ರೀರಾಮನ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ,” ಎಂದು ಮೋದಿ ಹಾರೈಸಿದ್ದಾರೆ.
ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುತ್ತಿರುವ ಯುನೆಸ್ಕೋ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.




