ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆಯಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ

Share with

ಮಂಗಳೂರು: ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ನಿಬಂಧನೆಗಳನ್ನು ಜಾರಿಗೆ ತಂದಿದೆ. ಕಾರ್ಯಕ್ರಮ ಆಯೋಜನೆಗೆ ಮೊದಲು ಪೊಲೀಸ್ ಅನುಮತಿ ಕಡ್ಡಾಯವಾಗಿದೆ. ಮಡಿಕೆಗಳನ್ನು 14 ಫೀಟ್ ಎತ್ತರದವರೆಗೆ ಮಾತ್ರ ಕಟ್ಟಬೇಕು.

ಮಡಿಕೆ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಟ್ಟುವಂತಿಲ್ಲ ಎಂದು ಸೂಚನೆ ಹೊರಡಿಸಲಾಗಿದೆ. ಮಡಿಕೆ ಒಡೆಯುವ ಸ್ವಯಂ ಸೇವಕರ ಮೇಲೆ ತಂಪು ನೀರು ಚೆಲ್ಲುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.

ಮೆರವಣಿಗೆಯಲ್ಲಿ ಸುಸಜ್ಜಿತ ಆಂಬುಲೆನ್ಸ್ ವ್ಯವಸ್ಥೆ ಮಾಡಿರಬೇಕು. ಮೆರವಣಿಗೆಯಲ್ಲಿ ಯಾವುದೇ ಕಾರಣಕ್ಕೂ ಡಿಜೆ ಬಳಸುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶವನ್ನು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಪ್ರಕಟನೆ ತಿಳಿಸಿದೆ.


Share with

Leave a Reply

Your email address will not be published. Required fields are marked *