ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಇಂದಿನಿಂದ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ.




