

ಹೊಸ ವರ್ಷದ ಶುಭಾಶಯ ಕೋರುವ ಸಂದರ್ಭವನ್ನು ಬಳಸಿ ಸೈಬರ್ ಖದೀಮರು ಹಾನಿಕಾರಕ ಲಿಂಕ್ ಹಾಗೂ APK ಫೈಲ್‌ಗಳನ್ನು ಕಳುಹಿಸಿ ಮೊಬೈಲ್ ಹ್ಯಾಕ್ ಮಾಡುವ ಸಾಧ್ಯತೆಯಿದೆ. ಆದ್ದರಿಂದ ಹೊಸವರ್ಷದ ಶುಭಾಶಯ ಕೋರುವ APK ಫೈಲ್, ಲಿಂಕ್‌ಗಳನ್ನು ತೆರೆಯದಿರಿ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸಾರ್ವಜನಿಕರಿಗೆ ಸೂಚಿಸಿದ್ದಾರೆ.
ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930ಕ್ಕೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್‌ಸೈಟ್‌ನಲ್ಲಿ ದೂರನ್ನು ದಾಖಲಿಸುವಂತೆ ತಿಳಿಸಿದ್ದಾರೆ.




