ವಿಮಾನದಲ್ಲಿ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಮಗುವಿಗೆ ಮರುಜನ್ಮ ನೀಡಿದ ವೈದ್ಯರು

Share with

ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಮಗುವಿಗೆ ಮರುಜನ್ಮ ನೀಡಿದ ವೈದ್ಯರು.

ನವದೆಹಲಿ: ಹೃದಯ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೈದ್ಯರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ ನಡುವಿನ ವಿಮಾನದಲ್ಲಿ ನಡೆದಿದೆ.

ಚಿಕಿತ್ಸೆಗಾಗಿ ರಾಂಚಿಯಿಂದ ಮಗುವನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಈ ಘಟನೆ ನಡೆದಿದ್ದು, ವಿಮಾನದ ಸಿಬ್ಬಂದಿ ವಿಚಾರ ತಿಳಿದ ಬಳಿಕ ಮಗುವಿಗೆ ನೆರವಾಗಲು ಯಾರಾದರೂ ವೈದ್ಯರಿದ್ದಾರೆಯೇ ಎಂದು ಕೇಳಿಕೊಂಡಿದ್ದಾರೆ.

ಈ ಸಮಯದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐಎಎಸ್ ಅಧಿಕಾರಿಯಾದ ಜಾರ್ಖಂಡ್ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ ಡಾ|ನಿತಿನ್ ಕುಲಕರ್ಣಿ ಮತ್ತು ರಾಂಚಿಯ ಸದರ್ ಆಸ್ಪತ್ರೆಯ ಡಾ|ಮೊಝಮ್ಮಿಲ್ ಫೆರೋಜ್ ಅವರು ಮಗುವಿಗೆ ಚಿಕಿತ್ಸೆ ನೀಡಲು ಮುಂದೆ ಬಂದಿದ್ದಾರೆ.

ಮಗುವಿಗೆ ವಯಸ್ಕರಿಗೆ ಬಳಸುವ ಮಾಸ್ಕ್ ಬಳಸಿ ಆಮ್ಲಜನಕವನ್ನು ಒದಗಿಸಿದ್ದು, ಬಳಿಕ ಮಗುವಿನ ಪೋಷಕರ ಬಳಿ ಇದ್ದ ಚುಚ್ಚುಮದ್ದನ್ನು ನೀಡಿ ಚಿಕಿತ್ಸೆ ನೀಡಿದ್ದಾರೆ. ಅವರ ಬಳಿ ಇಟ್ಟುಕೊಂಡಿದ್ದ ಚುಚ್ಚುಮದ್ದು ಬಹಳ ಸಹಾಯವಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

ಮೊದಲ 15-20 ನಿಮಿಷಗಳು ಬಹಳ ನಿರ್ಣಾಯಕ ಮತ್ತು ಒತ್ತಡದಿಂದ ಕೂಡಿದ್ದವು. ಏಕೆಂದರೆ ಮಗುವಿನ ಆರೋಗ್ಯ ಪ್ರಗತಿಯನ್ನು ಅಳೆಯುವುದು ಕಷ್ಟಕರವಾಗಿತ್ತು. ಅಂತಿಮವಾಗಿ ಕಣ್ಣುಗಳು ಸಹಜವಾದವು ಎಂದು ವೈದ್ಯರು ತಿಳಿಸಿದ್ದಾರೆ. ವಿಮಾನ ಲ್ಯಾಂಡ್ ಆದ ಮೇಲೆ ವೈದ್ಯಕೀಯ ತಂಡವು ಮಗುವನ್ನು ತಮ್ಮ ಆರೈಕೆಗೆ ತೆಗೆದುಕೊಂಡು ಆಮ್ಲಜನಕವನ್ನು ಒದಗಿಸಿದರು. ಡಾ|ಮೊಝಮ್ಮಿಲ್ ಫೆರೋಜ್ ಹಾಗೂ ಡಾ|ನಿತಿನ್ ಕುಲಕರ್ಣಿ ಅವರ ಕಾರ್ಯಕ್ಕೆ ಜನ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಪಡಿಸಿದ್ದಾರೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.


Share with

Leave a Reply

Your email address will not be published. Required fields are marked *