
ಮಂಗಳೂರು: ಜನವರಿ 18ರಿಂದ ಆರಂಭವಾಗಲಿರುವ ಮಂಗಳೂರು ಫುಡ್ ಫೆಸ್ಟಿವಲ್ ಗೆ ಸೋಷಿಯಲ್ ಮೀಡಿಯಾ ಟ್ರೆಂಡಿಂಗ್ ಸೆಲೆಬ್ರಿಟಿ ಡಾಲಿ ಚಾಯ್ ವಾಲಾ ಆಗಮಿಸಲಿದ್ದಾರೆ.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ “ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟಾ” ಜನವರಿ 18 ರಿಂದ 22 ರವರೆಗೆ ಐದು ದಿನಗಳ ಕಾಲ ನಗರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಮೊದಲ ದಿನದ ಆಕರ್ಷಣೆಯಾಗಿ ಡಾಲಿ ಚಾಯ್‌ವಾಲಾ ಭಾಗವಹಿಸಲಿದ್ದಾರೆ. ಈ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನವರಿ 18 ರಂದು ಮಂಗಳೂರಿನಲ್ಲಿ ಸಿಗುತ್ತೇನೆ ಎಂದು ಹೇಳಿ “ಮಜಾ ಕರೆಂಗೆ .. ಚಾಯ್ ಪಿಯೇಂಗೆ” ಎಂದು ಪೋಸ್ಟ್ ಮಾಡಿದ್ದಾರೆ.
ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಡಾಲಿಯ ಟೀ ಅಂಗಡಿಗೆ ಭೇಟಿ ನೀಡಿ ಚಹಾ ಕುಡಿದು ಪೋಸ್ಟ್ ಹಂಚಿದ್ದರು. ಇದಾದ ನಂತರ ಡಾಲಿ ಚಾಯ್‌ವಾಲಾ ದೇಶಾದ್ಯಂತ ಹೆಚ್ಚು ಹೆಸರುವಾಸಿಯಾದರು.