ದರ್ಗಾದಲ್ಲಿದ್ದ ಕಾಣಿಕೆ ಡಬ್ಬಿ ಕಳವು

Share with

ಉಪ್ಪಿನಂಗಡಿ: ಇಲ್ಲಿನ ಕೂಟೇಲು ದರ್ಗಾದಲ್ಲಿದ್ದ ಕಾಣಿಕೆ ಡಬ್ಬಿಯನ್ನು ಹೊಡೆದು ಅದರೊಳಗಿದ್ದ ಹಣವನ್ನು ಕಳವು ಮಾಡಿರುವ ಘಟನೆ ಸಂಭವಿಸಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆ ಬಗ್ಗೆ ನೂರಾನಿಯಾ ವೆಲ್‌ಫೇ‌ರ್ ಅಸೋಸಿಯೇಶನ್, ಬದ್ರಿಯಾ ಜುಮಾ ಮಸೀದಿ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಆದಂ ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದು, ಕಾಣಿಕೆ ಡಬ್ಬಿಯಲ್ಲಿ ಸುಮಾರು 5 ಸಾವಿರದಷ್ಟು ಹಣವನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *