ಕ್ಷಣಿಕ ಸುಖ ಗೋಸ್ಕರ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ…

Share with

ಕಲ್ಲಡ್ಕ : ಕ್ಷಣಿಕ ಸುಖ ಗೋಸ್ಕರ ದುರಭ್ಯಾಸಗಳಿಗೆ  ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಜೆಸಿಐ ವಲಯ ತರಬೇತುದಾರ, ಪತ್ರಕರ್ತ ಸಂದೀಪ್ ಸಾಲ್ಯಾನ್  ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ವಿಟ್ಲ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ  ಕಲ್ಲಡ್ಕ  ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು  ಇದರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು  ಇಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದು. ಹದಿಹರೆಯದ ವಯಸ್ಸಿನಲ್ಲಿ ಅನೇಕ ಆಕರ್ಷಣೆಗಳು ನಮ್ಮನ್ನು ಸೆಳೆಯುತ್ತದೆ. ಕೆಟ್ಟ ಕುತೂಹಲಕ್ಕೆ ಒಳಗಾಗಿ ದುಶ್ಚಟಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಿ ಎಂದು ತಿಳಿಸಿದರು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ವೈಯಕ್ತಿಕ ಆರೋಗ್ಯ ಹದಗೆಡುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವೂ ಹದಗೆಡುತ್ತದೆ. ನಮ್ಮ ಆರೋಗ್ಯದ ಜೊತೆಗೆ ಸಮಾಜದ ಸ್ವಾಸ್ಯವನ್ನು ಕಾಪಾಡುವ ಮಹತ್ತರವಾದ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಕ್ಷಣಿಕ ಸುಖಕ್ಕಾಗಿ ಮಾದಕ ವಸ್ತುಗಳನ್ನು ಸೇವನೆಗೆ ತುತ್ತಾಗದೆ ಕ್ರೀಡೆ, ಯೋಗ, ಸಂಗೀತದಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.ಬಳಿಕ  ಸ್ವಾಸ್ಥ್ಯ  ಸಂಕಲ್ಪದ ಪ್ರತಿಜ್ಞಾ  ವಿಧಿಯನ್ನು ಬೋಧಿಸಿದರು
ಅಖಿಲ  ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಅಧ್ಯಕ್ಷ  ಭಟ್ಯಪ್ಪ  ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಶಾಲಾ ಮುಖ್ಯ ಶಿಕ್ಷಕ ರಮೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು.  ಅವರು ಮಾತನಾಡಿ  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಧ್ಯವರ್ಜನ ಶಿಬಿರ, ಶಾಲಾ ಕಾಲೇಜುಗಳಲ್ಲಿ ಮಕ್ಕಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೂಲಕ ಹಮ್ಮಿಕೊಂಡು ನಮ್ಮ ರಾಜ್ಯದ ಸ್ವಾಸ್ಥ್ಯವನ್ನು ಕಾಪಾಡಲು ಪ್ರೇರಣೆದಾಯಕ ರಾಗಿರುತ್ತಾರೆ. ದುಶ್ಚಟ ಗಳು  ವಿದ್ಯಾರ್ಥಿಗಳ ಮಾನಸಿಕ ನೆಮ್ಮದಿಗೆ ಕೊಳ್ಳಿ ಇಡುತ್ತದೆ.  ಅವುಗಳಿಂದ ದೂರ ಇದ್ದರೆ ಬಾಳು ಬಂಗಾರವಗುತ್ತದೆ.ವಿದ್ಯಾರ್ಥಿಗಳು ಪಡೆದ ಮಾಹಿತಿಯನ್ನು ತಮ್ಮ ಜೀವನದಲ್ಲಿ  ಅನುಷ್ಠಾಣಗೊಳಿಸಿ ಉತ್ತಮ ಪ್ರಜೆಗಳಾಗಿ  ಎಂದರು.
ವೇದಿಕೆಯಲ್ಲಿ ಜನಜಾಗೃತಿ ವೇದಿಕೆ ಪದಾಧಿಕಾರಿ ಚಿನ್ನಾ ಕಲ್ಲಡ್ಕ, ಶಾಲಾ ಶಿಕ್ಷಕಿ ಶಶಿಕಲಾ, ಯೋಜನೆಯ ಗದಗ ಜಿಲ್ಲಾ ತರಬೇತಿ ಮೇಲ್ವಿಚಾರಕಿ ಹೇಮಲತಾ  ಉಪಸ್ಥಿತರಿದ್ದರು.  ಶಿಕ್ಷಕಿ ಸುನಿತಾ   ಸ್ವಾಗತಿಸಿ, ಸೇವಾ ಪ್ರತಿನಿಧಿ ವಿದ್ಯಾ  ವಂದಿಸಿ, ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ  ಕಾರ್ಯಕ್ರಮ ನಿರೂಪಿಸಿದರು


Share with

Leave a Reply

Your email address will not be published. Required fields are marked *