ಮದ್ಯ ಸೇವಿಸಿ ಅಡ್ಡಾದಿಡ್ಡಿಯಾಗಿ ಗ್ಯಾಸ್ ಬುಲೆಟ್ ಟ್ಯಾಂಕರ್ ಚಾಲನೆ..! ತಪ್ಪಿದ ಭಾರೀ ಅನಾಹುತ

Share with

ಉಡುಪಿ :ಟ್ಯಾಂಕರ್ ಚಾಲಕನೊಬ್ಬ ರಾತ್ರಿಯ ಹೊತ್ತು ಹೆಡ್ ಲೈಟ್ ಕೂಡ ಹಾಕದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಗ್ಯಾಸ್ ಬುಲೆಟ್ ಟ್ಯಾಂಕರ್ ಮಾಡಿಕೊಂಡು ಬಂದಿದ್ದು ಕೂದಲೆಳೆಯ ಅಂತರದಲ್ಲಿ ಹಲವಾರು ಅಪಘಾತಗಳು ತಪ್ಪಿದೆ.

ಕೊನೆಗೆ ಆತನನ್ನು ಅಂಬಲಪಾಡಿಯ ಬಳಿ ವಾಹನವನ್ನು ನಿಲ್ಲಿಸಿ ಸಾರ್ವಜನಿಕರು ಮದ್ಯ ವ್ಯಸನಿಯನ್ನು ವಶಕ್ಕೆ ಪಡೆದು ಪೋಲಿಸರಿಗೆ ಒಪ್ಪಿಸಿದ್ದಾರೆ.

ಟ್ಯಾಂಕ‌ರ್ ಚಾಲಕ ಮಹಾರಾಷ್ಟ್ರ ಮೂಲದವನಾಗಿದ್ದು, ಬಹಳಷ್ಟು ಮದ್ಯ ಸೇವಿಸಿ ರಾತ್ರಿಯ ಹೊತ್ತು ಹೆಡ್ ಲೈಟ್ ಕೂಡ ಹಾಕದೆ ಬಹಳಷ್ಟು ವೇಗವಾಗಿ ಬರುತ್ತಿದ್ದ. ಇದನ್ನು ಗಮನಿಸಿದ ವ್ಯಕ್ತಿಯೊರ್ವರು ವಾಹನವನ್ನು ಹಿಂಬಾಲಿಸಿಕೊಂಡು ಬಂದು ಅಂಬಲಪಾಡಿಯ ಬಳಿ ನಿಲ್ಲಿಸಿದ್ದಾರೆ.

ಈ ವೇಳೆ ಉದ್ರಿಕ್ತ ಸಾರ್ವಜನಿಕರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *