ಜೈಲಿನಲ್ಲಿ ಮಾದಕ ವಸ್ತುವಿಗೆ ನಿರ್ಬಂಧ; ನಿಯಮ ಪಾಲನೆ ಮಾಡಿದ ಜಿಲ್ಲಾ ಕಾರಾಗೃಹ ಸಿಬ್ಬಂದಿ ಮೇಲೆ ಮಂಗಳೂರು ಮೂಲದ ಕೈದಿಗಳಿಂದ ಹಲ್ಲೆ, ಆಸ್ಪತ್ರೆಗೆ ದಾಖಲು

Share with

ಕಾರವಾರ: ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ, ಕಠಿಣ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಿದ್ದಕ್ಕೆ ಜೈಲರ್‌ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಕೈದಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ನಡೆದಿದೆ.

ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ಹಲ್ಲೆ ಹಿನ್ನೆಲೆ ಜೈಲರ್ ಹಾಗೂ ಸಿಬ್ಬಂದಿಗಳು ಕಾರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರೋಪಿಗಳನ್ನು ಕಾರವಾರಕ್ಕೆ ಸ್ಥಳಾಂತರ ಮಾಡಲಾಗಿತ್ತು. ಈ ನಡುವ ಕಳೆದ ಕೆಲ ದಿನಗಳಿಂದ ಮಾದಕ ಪದಾರ್ಥಗಳನ್ನು ಜೈಲಿನಲ್ಲಿ ಸಂಪೂರ್ಣವಾಗಿ ನಿರ್ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೈದಿಗಳು ಕಾರಾಗೃಹ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ಬೆನ್ನಲ್ಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *