ಡಕ್ ಮ್ಯಾನ್… ಬಂದ ಕೊಹ್ಲಿ… ಹೋದ ಕೊಹ್ಲಿ

Share with

ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ (0) ಬಲಗೈ ವೇಗಿ ಕ್ಸೇವಿಯರ್ ಬಾರ್ಟ್ಲೆಟ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರ ನಡೆದರು.

ಇದಕ್ಕೂ ಮುನ್ನ ಪರ್ತ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಶೂನ್ಯಕ್ಕೆ ಕ್ಯಾಚಿತ್ತು ನಿರ್ಗಮಿಸಿದ್ದರು. ಇದೀಗ ಮತ್ತೊಮ್ಮೆ ಸೊನ್ನೆ ಸುತ್ತುವ ಮೂಲಕ ನಿರಾಸೆ ಮೂಡಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಶುಭ್ಮನ್ ಗಿಲ್ (4) ಹಾಗೂ ವಿರಾಟ್ ಕೊಹ್ಲಿ (0) ವಿಕೆಟ್ ಕಳೆದುಕೊಂಡಿದೆ. ಅಲ್ಲದೆ 10 ಓವರ್ಗಳ ಮುಕ್ತಾಯದ ವೇಳೆಗೆ ಭಾರತ ತಂಡವು 2 ವಿಕೆಟ್ ನಷ್ಟಕ್ಕೆ ಕೇವಲ 29 ರನ್ ಕಲೆಹಾಕಿದೆ.

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್.

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹೇಝಲ್ವುಡ್.


Share with

Leave a Reply

Your email address will not be published. Required fields are marked *