14 ಲೋಕಸಭಾ ಕ್ಷೇತ್ರಗಳ ಚುನಾವಣೆ: ರಾಜ್ಯದಲ್ಲಿ ಶೇ.64.57ರಷ್ಟು ಮತದಾನ

Share with

ಬೆಂಗಳೂರು: ರಾಜ್ಯದ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆದಿದೆ. ಜನ ಉತ್ಸಾಹದಿಂದಲೇ ಮತ ಚಲಾಯಿಸಿದ್ದು, ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನವು ಬಹುತೇಕ ಶಾಂತಿಯುತವಾಗಿ ನಡೆಯಿತು. ರಾಜ್ಯದಲ್ಲಿ ಶೇ.64.57ರಷ್ಟು ಮತದಾನ ಆಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಶೇ.74.87ರಷ್ಟು ಮತದಾನ ಆಗಿದ್ದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ ಶೇ.49.37ರಷ್ಟು ಮತದಾನವಾಗಿದೆ.

ಸಂಜೆ 6 ಗಂಟೆ ವೇಳೆಗೆ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಬೂತ್‌ಗಳಲ್ಲಿ ಇವಿಎಂ ಯಂತ್ರಗಳ ಪವರ್ ಬಟನ್ ಆಫ್ ಮಾಡಿದ ಮತಗಟ್ಟೆ ಅಧಿಕಾರಿಗಳು ಅವುಗಳನ್ನು ಸ್ಟ್ರಾಂಕ್‌ ರೂಮಿನಲ್ಲಿರಿಸಲು ಸಕಲ ಸಿದ್ಧತೆ ನಡೆಸಿದರು.

ಮಂಡ್ಯ-ಶೇ.74.87, ಕೋಲಾರ-ಶೇ.73.25, ಉಡುಪಿ ಚಿಕ್ಕಮಗಳೂರು-ಶೇ.72.69, ದಕ್ಷಿಣ ಕನ್ನಡ-ಶೇ.72.30, ಹಾಸನ-ಶೇ.72.13, ತುಮಕೂರು-ಶೇ.72.10, ಚಿಕ್ಕಬಳ್ಳಾಪುರ-ಶೇ.71.85, ಚಾಮರಾಜನಗರ- ಶೇ.69.86, ಚಿತ್ರದುರ್ಗ-ಶೇ.67.52, ಮೈಸೂರು-ಶೇ.67.55, ಬೆಂಗಳೂರು ಗ್ರಾಮಾಂತರ-ಶೇ.61.78, ಬೆಂಗಳೂರು ಉತ್ತರ-ಶೇ.51.51, ಬೆಂಗಳೂರು ಕೇಂದ್ರ-ಶೇ.49.77 ಹಾಗೂ ಬೆಂಗಳೂರು ದಕ್ಷಿಣ-ಶೇ.49.37ರಷ್ಟು ಮತದಾನವಾಗಿದೆ.


Share with

Leave a Reply

Your email address will not be published. Required fields are marked *