ಎಂಜಿನಿಯರ್ಸ್ ಡೇ: ಎಂಜಿನಿಯರ್ ದೇಶದ ಶ್ರೇಷ್ಠ “ಜಿನ್”

Share with

ಯಾವುದೇ ಒಂದು ರಾಷ್ಟ್ರದ ಅಭಿವೃದ್ಧಿಯ ಕಾರ್ಯದಲ್ಲಿ ಎಂಜಿನಿಯರ್‌ಗಳ ಕೊಡುಗೆ ಮಹತ್ವದ್ದಾಗಿದೆ. ಎಂಜಿನಿಯರ್‌ಗಳನ್ನು ಆಧುನಿಕ ಸಮಾಜದ ಬೆನ್ನೆಲುಬು ಎಂದು ಕರೆಯಲಾಗುತ್ತದೆ. ರಸ್ತೆಗಳು, ಸೇತುವೆಗಳು, ಕಟ್ಟಡ ನಿರ್ಮಾಣ ಕಾರ್ಯಗಳಿಂದ ಹಿಡಿದು ವಿವಿಧ ಯಂತ್ರೋಪಕರಣಗಳನ್ನು ರೂಪಿಸುವವರೆಗೆ ನಾವು ಅವಲಂಬಿಸಿರುವ ಪ್ರತಿಯೊಂದು ಮೂಲಸೌಕರ್ಯವನ್ನು ವಿನ್ಯಾಸಗೊಳಿಸುವಲ್ಲಿ ಎಂಜಿನಿಯರ್‌ಗಳು ಮಹತ್ವದ ಪಾತ್ರವನ್ನು ವಹಿಸುತ್ತಾರೆ.

ಹೈದ್ರಾಬಾದ್‌ನಲ್ಲಿ ಪ್ರವಾಹ ನಿಯಂತ್ರಣ ವ್ಯವಸ್ಥೆ, ಮೈಸೂರಿನಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟು ಮುಂತಾದ ಸಾಮಾನ್ಯ ಜನರಿಗೆ ಉಪಯುಕ್ತವಾಗುವಂತಹ ಕಾರ್ಯಗಳಿಂದ ಹಿಡಿದು, ಮೈಸೂರು ಸೋಪ್‌ ಫ್ಯಾಕ್ಟರಿ, ಉಕ್ಕಿನ ಕಾರ್ಖಾನೆ, ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ಮತ್ತು ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗಳನ್ನು ಸ್ಥಾಪಿಸುವಲ್ಲಿ ಇವರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.
ಹಾಗಾಗಿ ಎಂಜಿನಿಯರಿಂಗ್‌ ಕ್ಷೇತ್ರ, ಶಿಕ್ಷಣ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕಾರ್ಯದಲ್ಲಿ ಸರ್‌.ಎಂ. ವಿಶ್ವೇಶ್ವರಯ್ಯನವರ ಕೊಡುಗೆಯನ್ನು ಶ್ಲಾ ಸಲು ಪ್ರತಿವರ್ಷ ಸೆಪ್ಟೆಂಬರ್‌15 ಅಂದರೆ ವಿಶ್ವೇಶ್ವರಯ್ಯನವರ ಜನ್ಮ ದಿನದಂದು ಭಾರತದಲ್ಲಿ ರಾಷ್ಟ್ರೀಯ ಎಂಜಿನಿಯರ್‌ ದಿನವನ್ನು ಆಚರಿಸಲಾಗುತ್ತದೆ.


Share with

Leave a Reply

Your email address will not be published. Required fields are marked *