ಮಂಗಳೂರು: ನಗರದ ಕೆಪಿಟಿ ಹಾಗೂ ನಂತೂರು ಜಂಕ್ಷನ್‌ಗಳಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿ ಸಲುವಾಗಿ ಹೆದ್ದಾರಿ ಬದಿಯ ಮರಗಳನ್ನು ಕಡಿಯುವುದನ್ನು ವಿರೋಧಿಸಿ ಪರಿಸರವಾದಿಗಳು ಪ್ರತಿಭಟನೆಯನ್ನು ನಡೆಸಿದರು.
ವಿವಿಧ ಪರಿಸರ ಸಂಘಟನೆಯ ಕಾರ್ಯಕರ್ತರು ಪದವು ಹೈಸ್ಕೂಲ್ ಬಳಿ ಮರಗಳನ್ನು ಕಡಿಯುತ್ತಿರುವ ಪ್ರದೇಶದ ಬಳಿ ನಿಂತು ಪ್ರತಿಭಟನೆ ನಡೆಸಿದರು.
ಪರಿಸರವಾದಿಗಳು, ಕಡಿದ ಮರಕ್ಕೆ ಶವ ಸಂಸ್ಕಾರ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆ ವೇಳೆ ವಿವಿಧ ಶಾಲಾ ವಿಧ್ಯಾರ್ಥಿಗಳು ಹಾಗೂ ಪರಿಸರ ಪ್ರೇಮಿಗಳು ಭಾಗವಹಿಸಿದ್ದರು.