ಗ್ಯಾರಂಟಿ ಯೋಜನೆ ಹೊರೆಯಾದರೂ ನಿಲ್ಲಿಸಲ್ಲ, ಪರಿಷ್ಕರಿಸಲ್ಲ; ಡಿಕೆಶಿ

Share with

ಬೆಂಗಳೂರು: ‘ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ’ ಎಂಬ ತಮ್ಮ ಹೇಳಿಕೆಯು ವಿವಿಧ ರೀತಿಯ ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟ ಬೆನ್ನಲ್ಲೇ ಅದಕ್ಕೆ ಸಮಜಾಯಿಷಿ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ‘ಹೊರೆಯಾದರೂ ಅವುಗಳನ್ನು ನಿಲ್ಲಿಸುವುದಿಲ್ಲ ಮತ್ತು ಪರಿಷ್ಕರಣೆಯನ್ನೂ ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ನಿಜ, ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ, ಪರಿಷ್ಕರಣೆಯನ್ನೂ ಮಾಡುವುದಿಲ್ಲ’ ಎಂದು ಪುನರುಚ್ಚರಿಸಿದರು.

‘ಮೃತಪಟ್ಟಿರುವವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ತೆಗೆದುಕೊಳ್ಳಲಾಗಿದೆ. ಈ ರೀತಿ ದುರುಪಯೋಗವಾಗುವುದನ್ನು ತಪ್ಪಿಸಬೇಕು. ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಈ ಸಮಸ್ಯೆ ಹೇಗೆ ಬಗೆಹರಿಸಬೇಕು ಎಂದು ಸರ್ಕಾರ ಚರ್ಚೆ ಮಾಡುತ್ತಿದೆ’ ಎಂದರು.

ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗ್ಗೆ ಊಹಾಪೋಹಗಳ ಬಗ್ಗೆ ಕೇಳಿದಾಗ, ‘ಉದಾಹರಣೆಗೆ ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ ಮೃತಪಟ್ಟಿರುವರ ಹೆಸರಿನಲ್ಲಿ ಪಡೆಯಲಾಗುತ್ತಿದೆ.

ಇಂತಹವುಗಳನ್ನು ನಾವು ಸರಿಪಡಿಸಬೇಕಿದೆ. ಗೃಹಜ್ಯೋತಿಯಲ್ಲಿ ಈ ಸಮಸ್ಯೆ ಎದುರಾಗುವುದಿಲ್ಲ’ ಎಂದು ಹೇಳಿದರು.


Share with

Leave a Reply

Your email address will not be published. Required fields are marked *