ಬೆಳ್ತಂಗಡಿ: ಸುಡುಮದ್ದು ಘಟಕದಲ್ಲಿ ಸ್ಪೋಟ ಪ್ರಕರಣ; ಮಾಲೀಕ ಪೊಲೀಸರ ವಶಕ್ಕೆ..!

Share with

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಜ.28ರಂದು ಸಂಜೆ ಸಂಭವಿಸಿದ ಸ್ಪೋಟದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೈಯದ್ ಬಶೀರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುಡುಮದ್ದು ಘಟಕದ ಮಾಲೀಕ ಸೈಯದ್ ಬಶೀರ್

ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್‌ ಮೇಲೆ ಎಫ್.ಐ.ಆರ್ ದಾಖಲಾಗಿದೆ‌.

ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆಗೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಬಶೀರ್‌ ಎಂಬಾತನು ತನ್ನ ತೋಟದ ಶೆಡ್‌ನಲ್ಲಿ, ಕೇರಳ ಮೂಲದ 3 ಜನ ಹಾಗೂ ಹಾಸನ ಮೂಲದ 6 ಜನರನ್ನು ಸೇರಿಸಿಕೊಂಡು, ಸ್ಪೋಟಕ ವಸ್ತುಗಳ ನುರಿತ ಕಾಮಗಾರಿಗಳನ್ನು ತಯಾರಿಸುವ ವ್ಯಕ್ತಿಗಳನ್ನು ನಿಯೋಜಿಸದೆ ಹಾಗೂ ಸ್ಪೋಟಕ ವಸ್ತುಗಳು ಸಿಡಿದರೆ ಜೀವಹಾನಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗುತ್ತದೆ ಎಂದು ತಿಳಿದಿದ್ದರೂ, ಯಾವುದೇ ಮುಂಜಾಗ್ರತೆ ಕ್ರಮ ವಹಿಸದೆ ನಿರ್ಲಕ್ಷತನದಿಂದ ಕಾಮಗಾರಿ ನಡೆಸುವಾಗ, ಸ್ಪೋಟಕ ವಸ್ತುವಿನಲ್ಲಿ ಬೆಂಕಿ ಕಾಣಿಸಿ ಸ್ಪೋಟಗೊಂಡ ಪರಿಣಾಮ, ಕೆಲಸ ಮಾಡುತ್ತಿದ್ದ ಮೂವರು ಮೃತಪಟ್ಟಿದ್ದು, ಇದರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.


Share with

Leave a Reply

Your email address will not be published. Required fields are marked *