ಕಟಪಾಡಿ: ಎಕ್ಸ್ ಪ್ರೆಸ್ ಬಸ್- ಕಾರು‌ ನಡುವೆ ಅಪಘಾತ: ಮಗು, ಮಹಿಳೆ ಸಹಿತ ಹಲವರಿಗೆ ಗಾಯ

Share with

ಉಡುಪಿ: ಕಾರು ಹಾಗೂ ಖಾಸಗಿ ಎಕ್ಸ್ ಪ್ರೆಸ್ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಗು, ಮಹಿಳೆ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡ ಘಟನೆ ಉಡುಪಿ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್ ಹಾಗೂ ಎರ್ಟಿಗಾ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಕಾಪು ಸರ್ಕಲ್ ಇನ್ ಸ್ಪೆಕ್ಟರ್ ಜಯಶ್ರೀ ಮಾಣಿ, ಕಾಪು ತಹಶೀಲ್ದಾರ್ ಡಾ.ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *