
“ಏಪ್ರಿಲ್‌ನಿಂದ ಜೂನ್‌ವರೆಗೆ, ಉತ್ತರ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳು, ಮಧ್ಯ ಭಾರತ ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳು ಸಾಮಾನ್ಯಕ್ಕಿಂತ 2-4ರಷ್ಟು ಹೆಚ್ಚು ಹೀಟ್ ವೇವ್ ದಿನಗಳನ್ನು ಅನುಭವಿಸುವ ನಿರೀಕ್ಷೆಯಿದೆ” ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ವಾಯುವ್ಯ ಭಾರತದಲ್ಲಿ ಎರಡು ಪಟ್ಟು ಹೆಚ್ಚು ತಾಪಮಾನದ ದಿನಗಳನ್ನು ಎದುರಿಸಬಹುದು ಎಂದು IMD ಹೇಳಿದೆ.ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ವಿಪರೀತ ಸೆಖೆಯ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯದ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಎಪ್ರಿಲ್ 1ರಿಂದ ಉಡುಪಿ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. ದಿನಗಳೆದಂತೆ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.




