ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ..; ಖ್ಯಾತ ಯೂಟ್ಯೂಬರ್ ಪೊಲೀಸ್ ವಶ..!!

Share with

ಕಾಸರಗೋಡು: ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ 35 ವರ್ಷದ ಯೂಟ್ಯೂಬರ್‌ನನ್ನು ಬಂಧಿಸಲಾಗಿದೆ. ಕಾಸರಗೋಡು ನಿವಾಸಿ ಮುಹಮ್ಮದ್ ಸಾಲಿ ವಿದೇಶದಿಂದ ಹಿಂದಿರುಗಿದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ.

ಕಳೆದ ಏಳು ವರ್ಷಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದ ಸಾಲಿ, ಶಾಲು ಕಿಂಗ್ ಮೀಡಿಯಾ, ಶಾಲು ಕಿಂಗ್ ವ್ಲಾಗ್ಸ್ ಮತ್ತು ಶಾಲು ಕಿಂಗ್ ಫ್ಯಾಮಿಲಿ ಸೇರಿದಂತೆ ವಿವಿಧ ಹೆಸರುಗಳಲ್ಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹೊಂದಿದ್ದಾನೆ.

ಈತ 2016 ರಲ್ಲಿ ವಿವಾಹವಾಗಿದ್ದು ಮೂವರು ಮಕ್ಕಳಿದ್ದಾರೆ. ಪತ್ನಿಯಿಂದ ದೂರವಾದ ಅವಧಿಯಲ್ಲಿ ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಸಾಮಾಜಿಕ ಮಾಧ್ಯಮದ ಮೂಲಕ ಬಾಲಕಿಯ ಸಂಪರ್ಕಕ್ಕೆ ಬಂದಿದ್ದಾನೆ. ಪೊಲೀಸರ ಹೇಳಿಕೆಯ ಪ್ರಕಾರ, ಈತ ಹುಡುಗಿಯ ವಿಶ್ವಾಸವನ್ನು ಗಳಿಸಿ ಬಳಿಕ ಅವಳನ್ನು ಮದುವೆಯಾಗುವುದಾಗಿ ಹೇಳಿಕೊಂಡು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ.

ಪ್ರಕರಣ ದಾಖಲಾದ ನಂತರ, ಆರೋಪಿ ದೇಶ ಬಿಟ್ಟು ಪರಾರಿಯಾಗಿದ್ದಾನೆ. ಕೊಯಿಲಾಂಡಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದು, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆತನನ್ನು ಬಂಧಿಸಲಾಗಿದೆ.


Share with

Leave a Reply

Your email address will not be published. Required fields are marked *