ಅರಂತೋಡು: ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಹಿಳೆಯೋರ್ವರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ಸೆ.3ರ ಬುಧವಾರ ನಡೆದಿದೆ.

ಕೊಡಗಿನ ಸಿದ್ದಾಪುರದ ನೆಲ್ಲಿಹುದುಕೇರಿ ನಿವಾಸಿ ಶೋಭಾ ಮೃತಪಟ್ಟ ಮಹಿಳೆ.
ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಹಾಗೂ ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯ ಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಕೊಡಗಿನ ಸಿದ್ದಾಪುರದ ನೆಲ್ಲಿಹುದಿಕೇರಿಯದ್ದು ಎನ್ನಲಾಗಿದೆ.
ಗಾಯಾಳುಗಳಿಗೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡ ಲಾಗುತ್ತಿದೆ.




