ಉಡುಪಿ: ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಭಾರತ್ ಅಕ್ಕಿ ಮಾರಾಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಫೆ.28ರಂದು ಬೆಳಿಗ್ಗೆ 9.30ಕ್ಕೆ ಆದಿ ಉಡುಪಿ ಸಂತೆ ಮಾರ್ಕೆಟ್ ಬಳಿ ಚಾಲನೆ ನೀಡಲಿದ್ದಾರೆ.
![ಭಾರತ್ ಅಕ್ಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.](https://i0.wp.com/veekshakavani.com/wp-content/uploads/2024/02/ಶಾಸಕ-ಯಶ್-ಪಾಲ್-ಸುವರ್ಣ-1.jpg?resize=640%2C400&ssl=1)
ಉತ್ತಮ ಗುಣಮಟ್ಟದ ಅಕ್ಕಿಯನ್ನು ಕೇಂದ್ರ ಸರಕಾರ ಸಬ್ಸಿಡಿ ದರದಲ್ಲಿ ಪ್ರತಿ ಕೆಜಿಗೆ ರೂ.29ರಂತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.