Kumbale: ಅಂಗನವಾಡಿ ನೌಕರರು ಮತ್ತು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Share with

ಕುಂಬಳೆ: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ 25 ವರ್ಷಗಳನ್ನು ಪೂರೈಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಗೌರವ ಸಲ್ಲಿಸುವ ಸಲುವಾಗಿ ಬಿಜೆಪಿ ರಾಷ್ಟ್ರಮಟ್ಟದಲ್ಲಿ ಆಯೋಜಿಸುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಕುಂಬಳೆ ಮಂಡಲ ಸಮಿತಿಯ ವತಿಯಿಂದ ಅಂಗನವಾಡಿ ನೌಕರರು ಮತ್ತು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಕುಂಬಳೆ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಉದ್ಘಾಟಿಸಿದರು.

ಅಂಗನವಾಡಿಯಿಂದ ಹಿಡಿದು ಉನ್ನತ ಶಿಕ್ಷಣ ಸಂಸ್ಥೆಗಳವರೆಗೆ ನರೇಂದ್ರ ಮೋದಿ ಸರಕಾರದ ಸಮಗ್ರ ಅಭಿವೃದ್ಧಿಯ ಸಾಕ್ಷ್ಯಗಳಾಗಿವೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಹೇಳಿದರು. ಈ ನೌಕರರಿಗೆ ಸಮಾಜದಲ್ಲಿ ಗೌರವ ಮತ್ತು ಮಾನ್ಯತೆ ನೀಡಿದ್ದು ಹಾಗೂ ವಿವಿಧ ಕೇಂದ್ರ ಜನಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನಾಗಿ ಮಾಡಿದ್ದು ನರೇಂದ್ರ ಮೋದಿ ಸರಕಾರ; ಈ ಆರೋಗ್ಯ ಯೋಧರಿಗೆ ಭಾರತ ಸದಾ ಋಣಿಯಾಗಿದೆ ಎಂದು ಅವರು ಹೇಳಿದರು.

ಇನ್ನೂರಕ್ಕೂ ಹೆಚ್ಚು ಮಂದಿಗೆ ಅಶ್ವಿನಿಯವರು ಮಂಡಲ ಸಮಿತಿಯ ಪ್ರೀತಿಯ ಉಡುಗೊರೆಯನ್ನು ಹಸ್ತಾಂತರಿಸಿದರು.

ಬಿಜೆಪಿ ಕುಂಬಳೆ ಮಂಡಲ ಸಮಿತಿ ಅಧ್ಯಕ್ಷ ಬಿ. ವಿಕ್ರಮ್ ಪೈ ಅಧ್ಯಕ್ಷತೆ ವಹಿಸಿದ್ದರು.

ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ವಿ. ರವೀಂದ್ರನ್, ಸತೀಶ್ ಚಂದ್ರ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಕಣ್ಣೂರು ಮೇಘಲಾ ಉಪಾಧ್ಯಕ್ಷ ವಿಜಯ್ ಕುಮಾರ್ ರೈ, ಜಿಲ್ಲಾ ಉಪಾಧ್ಯಕ್ಷರಾದ ಪಿ. ರಮೇಶ್, ಮುರಳೀಧರ್ ಯಾದವ್, ಜಿಲ್ಲಾ ಸೆಲ್ ಕೋರ್ಡಿನೇಟರ್ ಸುಕುಮಾರ್ ಕುದ್ರೇಪಾಡಿ, ರಾಜ್ಯ ಕೌನ್ಸಿಲ್ ಸದಸ್ಯ ಜಯಂತ ಪಾಟ್ಟಾಳಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಮುಳಿಂಜ, ಮಹೇಶ್ ಪುಣಿಯೂರು, ಮಂಡಲ ಉಪಾಧ್ಯಕ್ಷೆ ಪ್ರೇಮಾವತಿ, ಜಿಲ್ಲಾ ಸಮಿತಿ ಸದಸ್ಯರಾದ ಬಾಬು ಕುಬ್ಬಣೂರು, ಜಯಂತಿ ಶೆಟ್ಟಿ, ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಪಿ. ವತ್ಸರಾಜ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ, ಕುಂಬಳೆ ಮಂಡಲ ಅಧ್ಯಕ್ಷೆ ಸುಧಾ ಗಣೇಶ್, ಕುಂಬಳೆ ಪಂಚಾಯತ್ ಸಮಿತಿ ಅಧ್ಯಕ್ಷೆ ಶಾರದಾ, ಸಾಕ್ಷಿ ಶೆಟ್ಟಿ, ಮಂಡಲ ಹಾಗೂ ಏರಿಯಾ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದು ಮಾತನಾಡಿದರು.


Share with

Leave a Reply

Your email address will not be published. Required fields are marked *