ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಿಸಿದ್ದಾರೆ. ಸೋನಿಯಾ, ರಾಹುಲ್ ಜೊತೆಗೆ ಇತರ 6 ವ್ಯಕ್ತಿಗಳು ಹಾಗೂ ಮೂರು ಕಂಪನಿಗಳನ್ನು ಸಹ ಎಫ್‌ಐಆರ್‌ನಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ.




