ವಿಟ್ಲ: ಬೊಬ್ಬೆಕೇರಿಯ ದೇವಸ್ಥಾನದ ಒಳರಸ್ತೆಯಲ್ಲಿರುವ ಜನಪ್ರಿಯ ಚಿಕನ್ ಸೆಂಟರ್ ನಲ್ಲಿ ತಡರಾತ್ರಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳೀಯರ ತುರ್ತು ಕಾರ್ಯಾಚರಣೆಯಿಂದಾಗಿ ಅನಾಹುತ ತಪ್ಪಿದಂತಾಗಿದೆ.

ಇಸ್ಮಾಯಿಲ್ ಎಂಬವರ ಮಾಲಕತ್ವದ ಚಿಕನ್ ಸೆಂಟರ್‌ನಲ್ಲಿ ಶನಿವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು. ಘಟನೆಯಲ್ಲಿ ಚಿಕನ್ ಸೆಂಟರ್‌ನ ಕೆಲವು ಸಾಮಾಗ್ರಿಗಳು ಹಾನಿಗೀಡಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.




