ಹಂಪನಕಟ್ಟೆ ಶೂ ಮಾರಾಟ ಮಳಿಗೆಗೆ ಬೆಂಕಿ..! ಅಪಾರ ನಷ್ಟ

Share with

ಮಂಗಳೂರು: ನಗರದ ಹಂಪನಕಟ್ಟೆಯ ಶೂ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಬೆಳಗ್ಗೆ ಸುಮಾರು 9 ಗಂಟೆಯ ವೇಳೆ ಅವಘಡ ಸಂಭವಿಸಿದ್ದು, ಶೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಿಂದಾಗಿ ಕೆಲ ಹೊತ್ತು ಆತಂಕದ ವಾತಾವರಣ ಉಂಟಾಗಿತ್ತು. ಮಳಿಗೆಯಲ್ಲಿದ್ದ ಶೂಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಘಟನೆಯಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.


Share with

Leave a Reply

Your email address will not be published. Required fields are marked *