ಮಂಗಳೂರು: ಇಲ್ಲಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿದ್ದ ಆರೋಮಾಝನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಸೆ.10ರ ಬುಧವಾರ ಮುಂಜಾನೆ ಸುಮಾರು 5 ಗಂಟೆಗೆ ಬೆಂಕಿ ತುಗುಲಿದ ಘಟನೆ ನಡೆದಿದೆ.

ಘಟನೆಯ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್, ಎನ್‌ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ.
ಈ ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ಕಾರಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.




