ಬಂಟ್ವಾಳ: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಜು. 12 ರಂದು ಬೆಳಿಗ್ಗೆ ನಡೆದಿದೆ.
ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೆಷಿನರಿಗಳಿಗೆ ಎಂಕಿ ತಗುಲಿದೆ. ಅಲ್ಲದೆ ಲಕ್ಷಾಂತರ ರೂಪಾಯಿಯಗಳ ತಲೆದಿಂಬು, ಹಾಸಿಗೆ ದಾಸ್ತಾನು ಮಾಡಿತ್ತು. ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು. ಹೀಗಾಗಿ ದಾಸ್ತಾನು ಕೊಠಡಿ ಸಂಪೂರ್ಣ ಬೆಂಕಿಗೆ ಆಹುತಿಯಾಗುವುದು ಅನಾಹುತ ತಪ್ಪಿದೆ.