ತೆಂಗಿನ ಎಣ್ಣೆ ಮಿಲ್ ಗೆ ಬೆಂಕಿ ಅವಘಡ; ಅಪಾರ ನಷ್ಟ

Share with

ಬ್ರಹ್ಮಾವರ: ಕೊಕ್ಕರ್ಣೆ ಪೇಟೆಯಲ್ಲಿ ತೆಂಗಿನ ಎಣ್ಣೆ ಮಿಲ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅಪಾರ ನಷ್ಟ ಉಂಟಾಗಿದೆ.

ಶುಕ್ರವಾರ(ಡಿ.5) ರಾತ್ರಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಫ್ಯಾಕ್ಟರಿಯಲ್ಲಿ ದಾಸ್ತಾನು ಇರಿಸಿದ ತೆಂಗಿನಎಣ್ಣೆ ಮತ್ತು ಕೊಬ್ಬರಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯ ಕೆನ್ನಾಲೆಗೆ ಫ್ಯಾಕ್ಟರಿಯ ಬಹುಭಾಗ ಸುಟ್ಟು ಕರಕಲಾಗಿದೆ.


Share with

Leave a Reply

Your email address will not be published. Required fields are marked *