ಉಡುಪಿ: ಗಂಗೊಳ್ಳಿ ಬಂದರಿನಲ್ಲಿ ಲಂಗರು ಹಾಕಿದ್ದ ಬೋಟ್ ಗೆ ಬೆಂಕಿ ಕಾಣಿಸಿಕೊಂಡು ಕೋಟ್ಯಾಂತರ ರೂಪಾಯಿ ನಷ್ಟವಾಗಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.
ಗಂಗೊಳ್ಳಿ ಮೀನುಗಾರಿಕಾ ಬಂದರು ಪರಿಸರದಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಬೆಂಕಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಅಕ್ಕ ಪಕ್ಕದ ಏಳು ಮೀನುಗಾರಿಕಾ ಬೋಟುಗಳು, ಎರಡು ಬೈಕ್ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಬಲೆ ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.
ಪಟಾಕಿ ಸಿಡಿದು ಬೆಂಕಿ ಹಬ್ಬಿರಬಹುದೇ ಎಂಬ ಸಂಶಯ ವ್ಯಕ್ತವಾಗಿದ್ದು, ಸ್ಥಳೀಯ ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಚರಣೆ ನಡೆದಿದೆ.