ಉಡುಪಿ: ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಪೆಟ್ರೋಲ್ ಬಂಕ್ ನ ಜನರೇಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಮಿಕರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಮಂಗಳವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪಂಪ್‌ನ ಸಿಬ್ಬಂದಿ, ಜನರೇಟರ್ ಅನ್ನು ಮುಖ್ಯ ರಸ್ತೆಗೆ ತಂದು ಬೆಂಕಿ ನಂದಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಸಂಪೂರ್ಣವಾಗಿ ಬೆಂಕಿ ನಂದಿಸಿದರು. ಪೆಟ್ರೋಲ್ ಬಂಕ್ ನ ಕಾರ್ಮಿಕರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.