ಕಾರ್ಕಳದ ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ

Share with

ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬರೆಬೈಲು ಎಂಬಲ್ಲಿ ನಡೆದಿದೆ.

ಕಾರ್ಕಳ: ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ಅ.4 ರಂದು ನಡೆದಿದೆ ಎಂದು ತಿಳಿದು ಬಂದಿದೆ.

ರಬ್ಬರ್ ಶೀಟ್ ಮಾಡಲು ಹಾಕಿದ್ದ ಬೆಂಕಿ ಕಟ್ಟಡಕ್ಕೆ ತಗುಲಿ ಈ ಅಗ್ನಿ ಅವಘಡ ಸಂಭವಿಸಿದ್ದು ಇದರ ಪರಿಣಾಮವಾಗಿ 50 ರಬ್ಬರ್ ಶೀಟ್, ಕಟ್ಟಡದ ಮೇಲ್ಬಾವಣಿಗೆ ಹಾಕಿದ್ದ ಶೀಟ್‌ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ ಸಂಜೀವ್, ಸಿಬ್ಬಂದಿ ಸುರೇಶ್, ಜಯಮೂಲ್ಯ, ಕೇಶವ್, ಸುಜಯ್ ಮತ್ತು ವಿನಾಯಕ್ ಪಾಲ್ಗೊಂಡಿದ್ದರು.


Share with

Leave a Reply

Your email address will not be published. Required fields are marked *