ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ

Share with

ಪುತ್ತೂರು: ಪುತ್ತೂರಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಡಿ.22ರಂದು ತಡರಾತ್ರಿ ನಡೆದಿದೆ.

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಸ್ಪತ್ರೆ ಆಡಳಿತ ಅಧಿಕಾರಿ ಡಾ|ಅಶಾ ಪುತ್ತೂರಾಯ ಮತ್ತು ಅಸ್ಪತ್ರೆ ಸಿಬ್ಬಂದಿಗಳು ರೋಗಿಗಳನ್ನು ಬೆಂಕಿ ತಗುಲಿದ ಕೊಠಡಿಯಿಂದ ತೆರವುಗೊಳಿಸಿದ್ದರು.

ಶಾಸಕ ಅಶೋಕ್ ರೈಯವರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು. ಪುತ್ತೂರಿನ ವಿಹಿಂಪ ಕಛೇರಿಯಲ್ಲಿ ತಂಗಿದ್ದ ದತ್ತ ಮಾಲಾಧಾರಿಗಳು ಹಾಗೂ ಸ್ಥಳೀಯ ಯುವಕರು ಬೆಂಕಿ ನಂದಿಸಲು ಅಗ್ನಿ ಶಾಮಕ ದಳಕ್ಕೆ ನೆರವಾಗಿದ್ದಾರೆ. ಮಾಹಿತಿ ತಿಳಿಯುತ್ತಲೇ ಶಾಸಕ ಅಶೋಕ್ ರೈಯವರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಆಶಾ ಪುತ್ತೂರಾಯ ಅವರು ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಹವಾನಿಯಂತ್ರಿತ ಯಂತ್ರ ಸಹಿತ ಅದರ ಬಳಿ ಇದ್ದ ಕೆಲವು ಉಪಕರಣಕ್ಕೆ ಹಾನಿಯಾಗಿದೆ. ತೀವ್ರ ನಿಗಾ ಘಟಕದಲ್ಲಿ ಇಬ್ಬರು ರೋಗಿಗಳಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.


Share with

Leave a Reply

Your email address will not be published. Required fields are marked *