ಅಷ್ಟಿ-ಅಹಮದ್‌ನಗರ ರೈಲಿನ 5 ಬೋಗಿಗಳಿಗೆ ಬೆಂಕಿ

Share with

ರೈಲಿನ 5 ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಮಹಾರಾಷ್ಟ್ರ: ಅಷ್ಟಿಯಿಂದ ಅಹಮದ್‌ನಗರಕ್ಕೆ ತೆರಳುತ್ತಿದ್ದ ರೈಲಿನ 5 ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದ್ದು, ನಾರಾಯಣೋಹ್ ಮತ್ತು ಅಹಮದ್‌ನಗರ ವಿಭಾಗದ ನಡುವೆ ಈ ಘಟನೆ ನಡೆದಿದ್ದು, ಮೊದಲಿಗೆ ಗಾರ್ಡ್ ಸೈಡ್ ಬ್ರೇಕ್ ವ್ಯಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ನಾಲ್ಕು ಬೋಗಿಗಳಿಗೆ ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದವರು ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಹರಡುವ ಮೊದಲು ಎಲ್ಲಾ ರೈಲು ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದರು ಎಂದು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ಡಾ| ಶಿವರಾಜ್ ಮನಸ್ಪುರೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.


Share with

Leave a Reply

Your email address will not be published. Required fields are marked *