ಬೆಳ್ತಂಗಡಿ: ನಾವೂರಿನ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವೂರು ನಿವಾಸಿ ರವಿ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾವೂರು ನಿವಾಸಿ ಸುರೇಶ್ ಇಂಚರ ಹಾಗೂ ಪುತ್ತೂರಿನ ಕೌಡಿಚಾರು ನಿವಾಸಿ ದಿನೇಶ್ ಪ್ರಭು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅ. 6ರಂದು ನಡೆದ ಈ ಕೃತ್ಯದಿಂದ ಔಷಧಿಗಳು ಹಾಗೂ ವೈದ್ಯಕೀಯ ಸಲಕರಣೆಗಳು ಸುಟ್ಟು ಸುಮಾರು ₹2–3 ಲಕ್ಷ ನಷ್ಟ ಸಂಭವಿಸಿತ್ತು. ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಬೂಮರೆಡ್ಡಿ ಹಾಗೂ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.





