ಉಡುಪಿ: ಸಾಲಿಗ್ರಾಮ ಪಟ್ಟಣಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿ ಸ್ಪಂದನಾ ಸ್ಟೋರ್ಸ್ ಬಳಿ ಸಾಕಷ್ಟು ಭೂ ಭಾಗ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ರಾತ್ರಿ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗಾಳಿಯ ರಭಸಕ್ಕೆ ಬೆಂಕಿಯ ಕೆನ್ನಾಲಿಗೆ ಹತ್ತಿರವಿರುವ ಪೊದೆ ಗಿಡಗಂಟಿಗಳಿಗೆ ತಾಗಿ ಸುಟ್ಟು ಭಸ್ಮವಾಗಿದೆ. ಖಾಲಿ ಇರುವ ಜಾಗದಲ್ಲಿ ಸಾಕಷ್ಟು ಗಿಡಗಂಟಿಗಳು ಬೆಳೆದಿದ್ದ ಹಿನ್ನೆಲೆಯಲ್ಲಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆವ್ಯಕ್ತವಾಗಿದೆ. ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಯುವಕರು ಬೆಂಕಿನಂದಿಸುವ ಕಾರ್ಯ ಮಾಡಿದ್ದಾರೆ.