ಶ್ರೀನಗರ: ಗುರುವಾರ ಬೆಳ್ಳಂಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದು, ಇಬ್ಬರು ಭದ್ರತಾ ಸಿಬಂದಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬೆಹಿಬಾಗ್ ಪ್ರದೇಶದ ಕಡ್ಡರ್‌ನಲ್ಲಿ ಭಯೋತ್ಪಾದಕರು ಇರುವ ಮಾಹಿತಿ ಮೇರೆಗೆ ಭದ್ರತಾ ಪಡೆ ಬುಧವಾರ ರಾತ್ರಿ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲು ಆರಂಭಿಸಿದೆ ಗುರುವಾರ ಮುಂಜಾನೆ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ತಂಡದ ಮೇಲೆ ಗುಂಡಿನ ದಾಳಿ ನಡೆಸಿದೆ ಈ ವೇಳೆ ಭದ್ರತಾ ಪಡೆ ಪ್ರತಿದಾಳಿ ನಡೆಸಿದ್ದಾರೆ ಗುಂಡಿನ ಚಕಮಕಿಯಲ್ಲಿ ಐದು ಮಂದಿ ಶಂಕಿತ ಉಗ್ರರು ಹತರಾಗಿದ್ದು ಇಬ್ಬರು ಭದ್ರತಾ ಸಿಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಸೇನೆ X ನಲ್ಲಿ ಟ್ವೀಟ್ ಮಾಡಿದ್ದು ಘಟನಾ ಸ್ಥಳದಲ್ಲಿ ಅಪಾರ ಪ್ರಮಾಣದ ಸ್ಪೋಟಕ ವಸ್ತು ಸಹಿತ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿರುವುದಾಗಿ ಹೇಳಿಕೊಂಡಿದೆ. ಸದ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗಿದೆ.