
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರಿದಿದೆ, ಜಿರಿಬಾಮ್ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಶಸ್ತ್ರಸಜ್ಜಿತ ದಾಳಿಕೋರರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ನಿದ್ದೆಯಲ್ಲಿರುವಾಗಲೇ ಓರ್ವ ವ್ಯಕ್ತಿಯನ್ನು ಗುಂಡು ಹಾರಿಸಿ ಕೊಂದ ಘಟನೆಯ ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ 7 ಕಿಮೀ ದೂರದಲ್ಲಿರುವ ಬೆಟ್ಟದಲ್ಲಿ ಗುಂಡಿನ ಚಕಮಕಿ ನಡೆದಿದೆ ಎನ್ನಲಾಗಿದೆ.