ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆ

Share with

ಸಂಕ್ರಾಂತಿಯ ಮುನ್ನ ದಿನ ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ನಿನ್ನೆ ರಾತ್ರಿ ಸುಮಾರು ಅರ್ಧ ಗಂಟೆ ವರ್ಷಧಾರೆಯಾಗಿದೆ.

ದಿಢೀರ್ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕೊಟ್ಟಿಗೆಹಾರ, ಬಾಳೂರು, ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸುತ್ತಮುತ್ತ ಮಳೆಯಾಗಿದೆ.

ಮಲೆನಾಡು ಭಾಗದಲ್ಲಿ ಈಗ ಕಾಫಿ ಕೊಯ್ಯಲಾಗುತ್ತಿದ್ದು, ಈ ಸಂದರ್ಭದಲ್ಲಿ ಮಳೆಯಾಗಿದ್ದರಿಂದ ಬೆಳೆಗಾರರು ಆತಂಕದಲ್ಲಿದ್ದಾರೆ.


Share with