ಮಂಗಳೂರು: ಬೈಕಿಗೆ ಮೀನು ಸಾಗಾಟದ ಲಾರಿಯೊಂದು ಢಿಕ್ಕಿ ಹೊಡೆದರ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಗುರುವಾರ(ಡಿ.21) ಮಧ್ಯಾಹ್ನ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಮೀನು ಸಾಗಾಟದ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ರವೂಫ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಮಂಗಳೂರು ನಗರ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಲಾರಿ ಚಾಲಕನ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.