ಪುತ್ತಿಗೆ: ದೇಲಂಪಾಡಿ ಶ್ರೀಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಅಷ್ಟಮಂಗಲ ದೈವ ಚಿಂತನೆಯ ಪ್ರಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಇದರಂತೆ ಬ್ರಹ್ಮಶ್ರೀ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ತಾಂತ್ರಿಕ ಕಾರ್ಯಕ್ರಮಗಳು ಜರಗಿತ್ತು. ಇದರ ಅಂಗವಾಗಿ ಬಲಿವಾಡು ಕೂಟ ಹಾಗೂ ನಿಧಿ ಸಮರ್ಪಣಾ ಕಾರ್ಯಕ್ರಮಕ್ಕೆ ಎಡನೀರು ಶ್ರೀಶ್ರೀಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಗಮಿಸಿದ್ದರು. ಈ ಸಂದರ್ಭ ಶ್ರೀ ಸ್ವಾಮೀಜಿಗಳ ಪಾದಪೂಜೆ,ಆಶೀರ್ವಚನ ಜರಗಿತು. ನೂರಾರು ಭಕ್ತರು ಪಾಲ್ಗೊಂಡರು. ಬ್ರಹ್ಮಶ್ರೀ ಗಣೇಶ ತಂತ್ರಿ, ಕಂಬಾರು ಶ್ರೀದುರ್ಗಾಪರಮೇಶ್ವರೀ ಕ್ಷೇತ್ರ ಆನುವಂಶಿಕ ಮೋಕ್ತೇಸರ ಕೋಳಾರು ಸತೀಶ್ಚಂದ್ರ ಭಂಡಾರಿ, ದೇಲಂಪಾಡಿ ಕ್ಷೇತ್ರ ಮೋಕ್ತೇಸರ ನ್ಯಾಯವಾದಿ ಐ.ಸುಬ್ಬಯ್ಯ ರೈ ಮಾತನಾಡಿದರು. ಕ್ಷೇತ್ರ ಸೇವಾ ಸಮಿತಿ ಉಪಾಧ್ಯಕ್ಷ ಶಂಕರ ರೈ ಮಾಸ್ತರ್ ಸ್ವಾಗತಿಸಿ ಕಾರ್ಯದರ್ಶಿ ಡಿ.ರಾಜೇಂದ್ರ ರೈ ವಂದಿಸಿದರು.